ಅಬ್ಬಾಸ್ ಮೇಲಿನಮನಿ

ಸಮಕಾಲೀನ ಪೀಳಿಗೆಯ ಕತೆಗಾರರಲ್ಲಿ ಅಬ್ಬಾಸ್ ಮೇಲಿನಮನಿ ಹೆಸರು ಬಹು ಮುಖ್ಯವಾದುದು.  ಶರಣರು ಮೆಟ್ಟಿದ ನೆಲದಲ್ಲಿರುವ ಅಬ್ಬಾಸ್ ಮೌಲ್ಯಗಳ ಬಿತ್ತು ಕಾಯಕವನ್ನು ತಮ್ಮ ಸಂವೇದನಶೀಲ ಕತೆಗಳ ಮೂಲಕ ಮಾಡುತ್ತ ಬಂದಿದ್ದಾರೆ.  ಆಡು-ನುಡಿ ಸೊಗಡಿನ ಭಾಷೆ; ಕಾವ್ಯದ ಲಯದಲ್ಲಿ ಓದುಗನಿಗೆ ನವನವೀನ ಪ್ರತಿಮೆ, ಆಕೃತಿಗಳನ್ನು ಕಟ್ಟಿಕೊಡುವುದನ್ನು ಇವರು ಕತೆಗಳ ಮೂಲಕ ಮಡಿರುತ್ತಾರೆ.

ಹಿಂದೂ ಮುಸ್ಲಿಂ ಸಮುದಾಯಗಳ ಸಾಮಾಜಿಕ ಸಂಬಂಧಗಳನ್ನು, ಅದರ ಸಂವೇದನೆಗಳನ್ನು ಅಬ್ಬಾಸ್‌ರ ಕತೆಗಳು ಕಟ್ಟಿಕೊಡುತ್ತವೆ.  ಒಂದು ಸಮಾಂತರದ ನೆಲೆಯಲ್ಲಿ ನಿಮತು ಧ್ಯಾನಸ್ಥನಾಗಿ ಕಾಣುವ ಪರಿ ಅನನ್ಯ.  ಸಮಾಜದ ಆ ಬಗೆಯ ವಿವಿಧ ಮುಖಗಳ ಅನುಭೂತಿ ಇವರ ಕತೆಗಳಲ್ಲಿದೆ.

ಕವನ ಸಂಕಲನ:

೧. ಕಥೆಯಾದಳು ಹುಡುಗಿ
೨. ಭಾವೈಕ್ಯ ಬಂಧ
೩. ಪ್ರೀತಿ ಬದುಕಿನ ಹಾಡು

ಕಥಾ ಸಂಕಲನ:

೧. ಪ್ರೀತಿಸಿದವರು
೨. ಕಣ್ಣ ಮುಂದಿನ ಕಥೆ
೩. ಅರ್ಧ ಸತ್ಯಗಳು (ಬನಹಟ್ಟಿಯ ಚಿಕ್ಕೋಡಿ ತಮ್ಮಣ್ಣಪ್ಪ ಸಾಹಿತ್ಯ ಪುರಸ್ಕಾರ)
೪. ಮತ್ತೊಂದು ಕರ್ಬಲಾ (ಮಂಗಳೂರಿನ ಮುಹ್ಯುದ್ದೀನ್ ಸಾಹಿತ್ಯ ಪ್ರಶಸ್ತಿ)
೫. ಅಬ್ಬಾಸರ ಐವತ್ತು ಕಥೆಗಳು (ಡಾ. ಗೊರೂರು ಸಾಹಿತ್ಯ ಪ್ರಶಸ್ತಿ)
೬. ಹುಡುಕಾಟ (ಪಿ.ಲಂಕೇಶ ಕಥಾ ಪ್ರಶಸ್ತಿ ಹಾಗೂ ಶಿವಾನಂದ ಪಾಟೀಲ ಕಥಾ ಪ್ರಶಸ್ತಿ)
೭. ಅರ್ಥ (ಕನ್ನಡ ಸಾಹಿತ್ಯ ಪರಿಷತ್ತಿನ ಸಮೀರವಾಡಿ ದತ್ತಿ ಪ್ರಶಸ್ತಿ)

ಲೇಖನ ಸಂಕಲನ:

ಸೌಹಾರ್ದ ಸಂಸ್ಕೃತಿ

ಸಂಪಾದನೆ:

೧. ಸಣ್ಣ ಕಥೆಗಳು - ೨೦೦೪ (ಕರ್ನಾಟಕ ಸಾಹಿತ್ಯ ಅಕಾಡೆಮಿ)
೨. ಬಾಗಲಕೋಟೆಯ ಮುಳುಗದ ಕಥೆಗಳು (ಜಿಲ್ಲಾ ಪ್ರಾತಿನಿಧಿಕ ಕಥಾ ಸಂಕಲನ, ಉಡುಪಿ ಸಾಹಿತ್ಯ ಸಮ್ಮೇಳನ)
೩. ಏನೆಲ್ಲಾ ಚಿತ್ರಗಳು ತಾಯಿ (ಅವ್ವನ ಕುರಿತಾದ ಪ್ರಾತಿನಿಧಿಕ ಕವನ ಸಂಕಲನ)
೪. ಪ್ರಜ್ಞೆ (ಆಕರ ಗ್ರಂಥ, ಕನ್ನಡ ಪುಸ್ತಕ ಪರಿಷತ್ತು ಬಾಗಲಕೋಟ)

ಈ ದಿನಾಂಕದವರೆಗೆ ಲಭ್ಯವಾದ ಮಾಹಿತಿ:  ೨೦೦೮

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ