-ಶಿಶುನಾಳ ಶರೀಫ್
ಬಯಸಿದಕೆ ಮೋಹಿಸದಿರುವಂಥಾದ್ದೇನೇ ಭಾಮಿನಿ
ಹೇ ಸಾಮಜಗಾಮಿನಿ ಇರುವಂಥಾದ್ದೇನೇ ಭಾಮಿನಿ || ಪ ||
ಬಾಳ ದಿವಸಾಯ್ತು ನಿಮ್ಮ್ನ್ನು ಕೇಳಿ ಕೀಳಿ ದಣಿದೆ ನೊಂದೆ
ಗಾಳಿ ವಂಂಟಪದೊಳಗೆ ಕೂಡಿ ಹೇಳಿದ ನುಡಿ ಆಳಾಪವಾಯ್ತು || ೧ ||
ಚಲುವೆ ಅನಿಮಿಷಾಗ್ರ ಕೊನಿಗೆ ಸುಳಿದರೊಂದು ಘಳಿಗೆಯೊಳಗೆ
ತಿಳಿದು ನೋಡಿದೆ ಲಲನಾಮಣಿಯೇ ಹೋಳಿದು ಹೋದರೋಳಿತೇ ನೀರ || ೨ ||
ಶಿಶುವಿನಾಳಧೀಶನೊಸಗೆಯೊಳಿರುವ ಕುಶಲವಂತೆ
ಹೊಸತು ಮಾಯಾ ಹರಿಸಿ ನಿಂದು ನಿಶಿತಾತ್ಮಕಿರಣಬಿಂದು || ೩ ||
****
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ