ದಯಮಾಡಬೇಕೇ ಮಾನಿನಿಯೆ

-ಶಿಶುನಾಳ ಶರೀಫ್

ದಯಮಾಡಬೇಕೇ ಮಾನಿನಿಯೆ
ಮೋಹದ ಮನಗೋನಿಯೇ                                             ||ಪ.||

ವನಜಾನನೆ ಬಾಳ ದಿನ ಮನಸೋತೆನು
ಕನಕರಿಸುತಲಿರುವೆನು ಕನಕದ ಗಿರಿಜಾನಿಯೆ                      ||೧||

ಚಂದ್ರವದನೇ ಬಾ ಇಂದ್ರಲೋಕದ ರಂಭೆ
ಎಂದಿಗಾದರೂ ಇಂಥಾ ಗುಣವೇನಂದಪುರುಪನ ಖಣಿಯೇ     ||೨||

ವಸುಧಿಯೋಳ್ ಶಿಶುನಾಳಧೀಶನ ಸೇವಕನೋಳು ಮನ
ತುಸು ಕರುಣವಿರಲಿ ಕಾಮಿನಿಯೇ ಕುಸುಮಾಸ್ತ್ರನ ಖಣಿಯೇ    ||೩||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ