-ಶಿಶುನಾಳ ಶರೀಫ್
ಗುರುನಾಥಾ ರಕ್ಷಿಸೋ ಹೇ
ಕರುಣಾಸಾಗರಾ ||ಪ||
ನರಜೀವಿಗೆ ಈ ದುರಿತ ಭವದ ಭಯ
ಪರಿಹರಿಸೆನುತಲಿ ಮರೆಹೊಕ್ಕೆನು ||೧||
ಪಾಪಾಂಬುಧಿಯನು ಪಾರುಮಾಡೆನುತಲಿ
ಶ್ರೀಪಾದಾಂಬುಜ ನಂಬಿಕೊಂಡೆ ಪರಮಾತ್ಮಾ ||೨||
ವಸುಧಿಯೊಳು ಶಿಶುನಾಳಧೀಶನ ಸೇವಕನ
ವ್ಯಸನಗಳಿದು ಸಂತೋಷದಿ ಸಲಹೋ ||೩||
****
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ