ಗುರುವೆ ಬಿನ್ನಪವುದ್ಧರಿಸೋ ಎನ್ನ
ಪರಮ ಸಖನ ಜ್ಜರದುರಿ ಪರಿಹರಿಸೋ || ಪ ||
ಇರುತಿರೆ ಆತನ ಘಟಕೆ ರೋಗಬರುವುದಿನ್ನ್ಯಾಕೆ
ಮರಗುವ ಸಂಕಟವ್ಯಾಕೆ
ಮರೆಹೊಕ್ಕೆ ನಿನ್ನಯ ಪದಕೆ
ನಿಮ್ಮ ಸ್ಮರಿಸಲು ಈ ಕರ್ಮ ಸಂಕಟವ್ಯಾಕೆ || ೧ ||
ದೇಹವೆರಡಾತ್ಮ ಒಂದಾಗಿ
ನಾವು ತಾವು ಗುರುಸೇವೆಗೆ ಆನುಕೂಲವಾಗಿ
ಭವದ ಲಂಪಟ ಕರ್ಮನೀಗಿ
ನಿತ್ಯ ಶಿವಧ್ಯಾನದೊಳು ನಾವು ಇರುತಿರಲಾಗಿ || ೨ ||
ಬೇಡಿಕೊಂಬುವೆ ಭಕ್ತಿಗಾಗಿ
ದಯಮಾಡಿ ರಕ್ಷಿಸಬೇಕು ಕಲ್ಮಷ ನೀಗಿ
ನೋಡಿ ಕಡಿಯೋ ಭವಬಂದಾ
ರೂಡಿಪ ಶಿಶುನಾಳಧೀಶನ ಕಂದಾ || ೩ ||
****
-ಶಿಶುನಾಳ ಶರೀಫ್
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ