ಗುರುವಿಗೆ ಮರುಳು ಮಾಡುವರೇನೆ ಮಾನಿನಿ

-ಶಿಶುನಾಳ ಶರೀಫ್

ಗುರುವಿಗೆ ಮರುಳು ಮಾಡುವರೇನೆ ಮಾನಿನಿ ?
ಧರೆಯೊಳು ಪ್ರಭುವರ ದೊರಕುವನೆ ?             ||ಪ.||

ಸರಸಿಜಮುಖಿವರ ಪರಮಮಧುಕೇಶ್ವರ
ನರನಲ್ಲ ತಿಳಿ ನಿನ್ನ ಸರಕೇನೆ ?
ಧರಿಗೆ ಪಾರ್ವತಿ ತನ್ನ ತಾಮಸರೂಪದಿ
ನೆರೆ ಬಂದರೇನಾತ ಬೆರೆಯುವನೇ ?               ||೧||

ಚನ್ನ ಚಲ್ವಿಕೆ ಕಂಡು ಸೋಲದೆ ತಾ ನಿಂದು
ಆನ್ಯರು ಕೇಳಿದರ್‍ಹೇಳುವನೆ ?
ತನ್ನ ನಿಜದಿ ತಾನೆ ಲೀಲೆಯಿಂದಿರುವನು
ಶೂನ್ಯಕ್ಕೆ ಶೂನ್ಯ ತಾನಿರುತಿಹನು                    ||೨||

ಮೊದಲು ಶಿಶುವಿನಾಳ ಸದ್ಗುರು ನಿರ್ಮಳಸ್ಥಳ-
ಕ್ಕೊದಗಿ ಮೃದಂಗವ ಬಾರಿಸಿದ
ಆದನು ತಿಳಿದು ಸುಮನಿರು ನಡಿ ಹಿಂದಕ್ಕೆ
ಇದಕೇನು ಬಯಸುವದು ಬ್ಯಾಡಿನ್ನು                ||೩||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ