-ಶಿಶುನಾಳ ಶರೀಫ್
ಹುಬ್ಬಳ್ಳಿಯೊಳು ಮನಿ ಮಾಡಿದ್ಯಾ
ಅಬ್ಬರದಿ ಮಾಂತನೊಳು ಕೂಡಿದ್ಯಾ || ಪ||
ಮಂಗಳಾತ್ಮನೊಡನೆ ಮಾತಾಡಿದ್ಯಾ
ಗಂಗಾಧರನಿಗೆ ಕೋರಿಯ ಬೇಡಿದ್ಯಾ || ೧||
ಮರ್ಟಾಳ ಪತಿಯ ಪದವ ಹಾಡಿದ್ಯಾ
ಕಾಟ ಕರ್ಮ ಕಳಿದು ಈಡ್ಯಾಡಿದ್ಯಾ || ೨||
ತಾನರಸಿ ವಿಷಯ ಕಲಿ ದೂಡಿದ್ಯಾ
ದೇವ ಶಿಶುನಾಳಧೀಶಗ ಕರವ ಜೋಡಿಸಿದ್ಯ || ೩ ||
****
ಕೀಲಿಕರಣ: ಎಂ.ಎನ್.ಎಸ್. ರಾವ್
ಹುಬ್ಬಳ್ಳಿಯೊಳು ಮನಿ ಮಾಡಿದ್ಯಾ
ಅಬ್ಬರದಿ ಮಾಂತನೊಳು ಕೂಡಿದ್ಯಾ || ಪ||
ಮಂಗಳಾತ್ಮನೊಡನೆ ಮಾತಾಡಿದ್ಯಾ
ಗಂಗಾಧರನಿಗೆ ಕೋರಿಯ ಬೇಡಿದ್ಯಾ || ೧||
ಮರ್ಟಾಳ ಪತಿಯ ಪದವ ಹಾಡಿದ್ಯಾ
ಕಾಟ ಕರ್ಮ ಕಳಿದು ಈಡ್ಯಾಡಿದ್ಯಾ || ೨||
ತಾನರಸಿ ವಿಷಯ ಕಲಿ ದೂಡಿದ್ಯಾ
ದೇವ ಶಿಶುನಾಳಧೀಶಗ ಕರವ ಜೋಡಿಸಿದ್ಯ || ೩ ||
****
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ