ನಡಿ ನಡಿಯುತ ಗಂಡ ನಡಮುರಿದೊದೆನ್ನ

-ಶಿಶುನಾಳ ಶರೀಫ್

ನಡಿ ನಡಿಯುತ ಗಂಡ ನಡಮುರಿದೊದೆನ್ನ
ಹುಡುಗಾಟ ಬಿಡಿಸಿ ಹೌದೆನಿಸಿದನೇ                ||ಪ||

ಮದನಗಿತ್ತ್ಯಾಗಿ ಬಂದು ಮನೆಯೊಳಗಿರುತಿರೆ
ಬೆದಗಡಿಕಿಯೆಂದು ಹೆಸರಿಡಿಸಿದನೇ
ನದರಿನಮ್ಯಾಲ ತಾ ನದರಿಟ್ಟಿ ಎನಗೆ
ಮುದದಿ ಚುಂಬನಕೊಟ್ಟು ರಮಿಸಿದನೇ          ||೧||

ಹೊಸದಾದ ಸೊಸಿಯಾದ ಆಕ್ಕನಮಗಳಿಗೆ
ಮುಸರಿ ಬಳಸಿ ಕಸ ಹೊಡಿಸಿದನೇ
ವಸುಧಿಯೊಳು ಶಿಶುನಾಳಧೀಶನ ದಯದಿಂದ
ಕಸೂತಿಯ ಕುಪ್ಪಸ ತೋಡಿಸಿದನೇ               ||೨||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ