-ಶಿಶುನಾಳ ಶರೀಫ್
ನನ್ನೊಳಗ ನಾ ತಿಳಕೊಂಡೆ
ನನಗ ಬೇಕಾದ ಗಂಡನ್ನ ಮಾಡಿಕೊಂಡೆ ||ಪ||
ಆಜ್ಞಾಪ್ರಕಾರ ನಡಕೊಂಡೆ
ನಾ ಎಲ್ಲಾರ ಹಂಗೊಂದು ಹರಕೊಂಡೆ ||ಅ.ಪ.||
ಆರು ಮಕ್ಕಳನಡುವಿಗಟ್ಟಿ
ಮೂರು ಮಕ್ಕಳ ಬಿಟ್ಟಗೊಟ್ಟೆ
ಇವನ ಮೇಲೆ ಮನವಿಟ್ಟೆ
ಎನ್ನ ಬದುಕು ಬಾಳೆವೆಲ್ಲಾ ಬಿಟ್ಟಗೊಟ್ಟೆ ||೧||
ಒಂದನಾಡಿದರೆ ಕಡಿಮೆಯೆಂದೆ
ಮತ್ತೆರಡನಾಡಿದರೆ ಹೆಚ್ಚೆಂದೆ
ಬೆಡಗ ಮಾತಿದು ನಿಜವೈತಂದೆ
ಇದು ಸುಜ್ಞಾನಿಗಳಿಗೇ ತಿಳಿತೆಂದೆ ||೨||
ಶಿವಶಿವಾಯೆಂಬ ಹಾದಿ ಬೇಡಿಕೊಂಡೆ
ಗುರೂಪದೇಶವ ಪಡಕೊಂಡೆ
ಈ ಭವಕೆ ಬಾರದಂತೆ ಮಾಡಿಕೊಂಡೆ
ಗುರುಗೋವಿಂದನ ಪಾದಾ ಹಿಡಕೊಂಡೆ ||೩||
****
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ