ನಿನಗೇನಾತ ಸಖಿ

-ಶಿಶುನಾಳ ಶರೀಫ್

ನಿನ್ನವನು ನಾ
ನಿನಗೇನಾತ ಸಖಿ                  ||ಪ||

ಆನುಮಾನವಿಲ್ಲದೆ
ಆತ್ಮನ ಸವಿಸುಖ
ಚಿನುಮಯನಾಶ್ರಯಕೆ
ಆನುಮೋದಿಸು ವಿಭಾ
ನಿನಗೇನಾತ ಸಖಿ                  ||೧||

ಮೃಡಿಯಡರುತ
ಪೊಡವಿಏಗೆ ಬಿದ್ದು ಮಿಡಕುವಿ
ಕದುಚಿಂತೆಯನು ಕಂಡು
ನಿನಗೇನಾತ ಸಖಿ                  ||೨||

ಕಾಮಿನಿ ಕಲಹದ
ನಲೆ ತಿಳಿದ ಹಮ್ಮಿನೊಳು
ಶ್ರೀ ಮುನಿರಾಯ ನಿನ್ನ್ಹ್ಯಾಂಗ
ಸೈರಿಪನು ವಿಭಾ
ನಿನಗೇನಾತ ಸಖಿ                   ||೩||

ಉಟ್ಟ ಪಿತಾಂಬರ
ಗಟ್ಟ್ಯಾಗಿ ಕಟ್ಟಿಕೋ
ಮುಟ್ಟರೆ ಸಡಿಲದೆ
ಉಟ್ಟು ಮೋದಿಸು ವಿಭಾ
ನಿನಗೇನಾತ ಸಖಿ                   ||೪||

ಇಂದುಮುಖಿಯೆ ಕೇಳೇ
ಕುಂದನಿಡುವರುಂಟೆ
ಸುಂದರ ಶಿಶುನಾಳ-
ದೀಶ ನಿನ್ನವನು ನಾ
ನಿನಗೇನಾತ ಸಖಿ                   ||೫||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ