ನೋಡುನು ಬಾ ಗುರುನಾಥನ

ನೋಡುನು ಬಾ ಗುರುನಾಥನ ಸಖಿ
ನೋಡುನು ಬಾ ಮುಕ್ತಿ ಬೇಡುನು ಬಾರೆ                       || ಪ ||

ಕಾಮಿತ ಫಲವಾ ಪ್ರೇಮದಿ ಕೊಡುವಾ
ನಮ ರೂಪವ ಸಂಜೀವನ ಸಖಿ ನೋಡುನು ಬಾ             || ೧ ||

ಪರಮ ಪ್ರಕಾಶ ಪಾವನಕರ ಜಗದಿಶನೇ ಸಖಿ
ಹೃತಭವತಾಪಾ ಸಂಹೃತ ಕೋಪಾ ಗುಡಿಪುರ
ಕಲ್ಮಠ ಸ್ವರೂಪನ ಸಖಿ ನೋಡುನು ಬಾ                        || ೨ ||

ವಸುಧೆಗೆ ಶಿಶುನಾಳಧೀಶನೆನಸಿದ
ಎಸೆವೆನ್ನಿ ನೇತ್ರನ ವಂದಿಸಿಯಾತನ ಸಖಿ ನೋಡುನು ಬಾ || ೩ ||
                ****
-ಶಿಶುನಾಳ ಶರೀಫ್


ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ