ಏನಾಯ್ತೇ ಮಾನಿನಿ

-ಶಿಶುನಾಳ ಶರೀಫ್

ಏನಾಯ್ತೇ ಮಾನಿನಿ
ಏನಾಯ್ತೇ ಮಾನಿನಿ                               || ಪ. ||

ಭಾನು ಕಿರಣ ಕಾಣಿಸುವ ಪ್ರಕಾಶವು
ಜ್ಞನದೋಳಗೆ ಶುಭ ತಾನೇ ತಾನೆ            || ಅ. ಪ. ||

ನಿನ್ನ ಮಾರಿ ನೋಡಿದರೆ
ಘನ ಸರಿ ಕೂಡಿದೆ
ಹೀನ ವಿಷಯ ಸಂಹರಿಸುವದಕೆ
ಅನುಮಾನವ್ಯಾಕೆ ವನಜಾಕ್ಷಿಮಣಿಯೇ       || ೧ ||

ಶಿಶುನಾಳಧಿಶನು
ಅಸಮಾಕ್ಷನೀತನು
ಕುಸುಮಗಾತ್ರೆಯನ್ನಸುವ ತೋರದೆ
ಹಸನವಲ್ಲ ಕೋಸರಾಡುವದಿದು               || ೨ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ