ಎಂಥಾ ನಗಿ ಬಂತೋ ಎನಗೆ

-ಶಿಶುನಾಳ ಶರೀಫ್

ಎಂಥಾ ನಗಿ ಬಂತೋ ಎನಗೆ          
ಗಡ ಮುದುಕಿಯ ಕಂಡು                       ||ಪ||

ನಿಂತು ನೋಡಲಾಗವ್ಲ್ಲದು ಕಣ್ಣಿಲೆ     
ಸಂತ್ಯಾಗ ಮಂದಿ ಕಾಣದವಳೋ           ||ಅ.ಪ.||

ಆರು ಮೂರು ಗೆಳತೇರ ಸ್ನೇಹವನು
ದೂರ ಮಾಡದೆ ಸುಮ್ಮ್ನದಿ ತಾನು
ದಾರಿಹಿಡಿದು ಸಾರುವಳಿದು ಏನು
ದಾರಿ ನಡೆದ ಮುದುಕಿಯ ಕಂಡು           || ೧ ||

ಎಂಟು ಮಂದಿ ನೆಂಟರು ಮನಸೋತು
ಗಂಟುಬೀಳಲವರನು ಕೂಡಿಕೊಂಡು
ಪಂಟುಹಚ್ಚಿ ಪರವಶದಿ ಪೊಗುತಿಹ
ಸೊಂಟಮುದುಕಿಯನು ಕಂಡು              || ೨ ||

ಸಂದಿಗೊಂದಿಯೊಳು ಹುಡಕುತ ಬರಲು
ತಂದೆ ಗುರುಗೋವಿಂದನ ಚರಣವ
ಹೊಂದಿಕೋ ಎಂದರೆ ನಿಂದೆಯನಾಡುತ
ಮುಂದಕೆ ನಡಿವಳು ಮಂದಗಮನದಿ       || ೩ ||
                 ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ