ಎರಗಿ ಬಿನ್ನಾ ಮಾಡದ್ಹೋದರು

-ಶಿಶುನಾಳ ಶರೀಫ್

ಎರಗಿ ಬಿನ್ನಾ ಮಾಡದ್ಹೋದರು
ಗುರುವರನ ಗಣರಿಗೆರಗಿ             
ಬಿನ್ನಾವ್ವ ಮಾಡದ್ಹೋದರು
ನರಗುರಿಗಳು ಪರಿಹಾಸ್ಯದಿ
ಜರಿದರು ಎನ್ನ ಕರೆಸಿದರೈ
ಹರನ ಶಾಸ್ತ್ರಕೆ ವರಪ್ರಸ್ತಕೆ
ಮರಿತರು ನಿಮಗರಿಕಿರಲೈ                  ||ಪ||


ಹಿಂದಕೊಮ್ಮೆ ಪ್ರಥಮರೊಡನೆ
ದ್ವಂದ್ವ ಬಯಸಿ ರೇಚಿತಂದೆ
ಒಂದು ಕರಿಯ ಎಲಿಯ ಕೊಟ್ಟ
ಇಂದು ಪಥಕೆ ಮುಟ್ಟಲಿಲ್ಲಾ
ಆಂದಿನ ಕಥೆ ಇಂದರಿಯದೆ
ಬಂಧನಕ್ಕೊಳಗಾಗುವರೆ
ಕುಂದಿಟ್ಟರು ನಿಂದಿಸುತಲಿ
ಮಂದಾತಮರು ಮಹಾಗರ್ವದಿ               ||೧||

ನಿಷ್ಟಿ ಹಿಡಿದು ನಿಜಗ ನಿಲ್ಲದೆ
ಇಷ್ಟಲಿಂಗದ ಆರವು ಇಲ್ಲದೆ
ಶ್ರೇಷ್ಟ ಭಲಾ ಶಿವ ಜಂಗಮ-
ರಿಷ್ಟು ಬಳಲಿಸಿರುವರಿವರು
ಕೆಟ್ಟರು ಕುಚೇಷ್ಟರು
ಬ್ರಷ್ಟರು ಮಹಾಗರ್ವಿಷ್ಟರು
ತಟ್ಟಲೀ ಪಾಪ ಆವರಿಗೆ
ಕುಟ್ಟಲೀ ಶಿವಾ ಕುಟ್ಟಲೀಗ                      ||೨||

ಪೃಥ್ವಿಪಾಲ ಶಿಶುವಿನಾಳ
ಸತ್ಯಶರಣ ಸಖನ
ಕೃತ್ಯ ಕಪತ ಬಯಸಿದವರು
ಕತ್ತಿ ಜನ್ಮಕೆ ಹೋಗುತಿಹರು ಚಿತ್ತೈಸಿರಿ
ಅರ್ತಿಯಲಿ ಚಿತ್ತೈಸಿರಿ ಇದನರಿತು
ಮತೆ ಕಳಸ ಗ್ರಾಮಕೆ
ಪ್ರಸ್ತವಾಯಿತೋ ಭಕ್ತಿಯಲಿ                    ||೩||
                ****

ಕೀಲಿಕರಣ: ಎಂ.ಎನ್.ಎಸ್. ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ