-ಶಿಶುನಾಳ ಶರೀಫ್
ಸೂಜಿಯೇ ನೀನು ಸೂಜಿಯೇ
ಈ ರಾಜ್ಯದೊಳಗೆಲ್ಲ ತೇಜ ಕಾಣಿಸುವಂಥ ||ಪ||
ಹರಿಯ ಶಿರದಮ್ಯಾಲೆ ಮೆರೆದಂಥ ಸೂಜಿಯೇ
ಹರನ ಕಪಾಲದಿ ಬೆರೆದಂಥ ಸೂಜಿಯೇ
ಮರವಿಯ ಆರವಿಯ ಹೊಲಿವಂಥ ಸೂಜಿಯೇ
ಮರೆ ಮೋಸವಾಗಿ ಮಾಯವಾದಂಥ ಸೂಜಿಯೇ ||೧||
ತಂಪುಳ್ಳ ಉಕ್ಕಿನೊಳ್ ಹುಟ್ಟಿದ ಸೂಜಿಯೇ
ಶಿಂಪಿಗರಣ್ಣಗೆ ಬಲವಾದ ಸೂಜಿಯೇ
ಇಂಪುಳ್ಳ ದಾರಕ್ಕೆ ಸೊಂಪುಗೊಡಿಸುವಂಥ
ಕಂಪನಿ ಸರಕಾರ ವಶವಾದ ಸೂಜಿಯೇ ||೨||
ಆಂಗಳ ಬೈಲೊಳು ಹೋದಂಥ ಸೂಜಿಯೇ
ಸಿಂಗಾರದಂಗಿಯ ಹೊಲಿವಂಥ ಸೂಜಿಯೇ
ತುಂಗ ಶಿಶುನಾಳಧೀಶನ ಸೇವಕ
ರಂಗಿಲಿ ಹುಡುಕಲು ಸಿಗದಂಥ ಸೂಜಿಯೇ ||೩||
****
ಕೀಲಿಕರಣ: ಎಂ.ಎನ್.ಎಸ್. ರಾವ್
ಸೂಜಿಯೇ ನೀನು ಸೂಜಿಯೇ
ಈ ರಾಜ್ಯದೊಳಗೆಲ್ಲ ತೇಜ ಕಾಣಿಸುವಂಥ ||ಪ||
ಹರಿಯ ಶಿರದಮ್ಯಾಲೆ ಮೆರೆದಂಥ ಸೂಜಿಯೇ
ಹರನ ಕಪಾಲದಿ ಬೆರೆದಂಥ ಸೂಜಿಯೇ
ಮರವಿಯ ಆರವಿಯ ಹೊಲಿವಂಥ ಸೂಜಿಯೇ
ಮರೆ ಮೋಸವಾಗಿ ಮಾಯವಾದಂಥ ಸೂಜಿಯೇ ||೧||
ತಂಪುಳ್ಳ ಉಕ್ಕಿನೊಳ್ ಹುಟ್ಟಿದ ಸೂಜಿಯೇ
ಶಿಂಪಿಗರಣ್ಣಗೆ ಬಲವಾದ ಸೂಜಿಯೇ
ಇಂಪುಳ್ಳ ದಾರಕ್ಕೆ ಸೊಂಪುಗೊಡಿಸುವಂಥ
ಕಂಪನಿ ಸರಕಾರ ವಶವಾದ ಸೂಜಿಯೇ ||೨||
ಆಂಗಳ ಬೈಲೊಳು ಹೋದಂಥ ಸೂಜಿಯೇ
ಸಿಂಗಾರದಂಗಿಯ ಹೊಲಿವಂಥ ಸೂಜಿಯೇ
ತುಂಗ ಶಿಶುನಾಳಧೀಶನ ಸೇವಕ
ರಂಗಿಲಿ ಹುಡುಕಲು ಸಿಗದಂಥ ಸೂಜಿಯೇ ||೩||
****
ಕೀಲಿಕರಣ: ಎಂ.ಎನ್.ಎಸ್. ರಾವ್
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ