- ಶಿಶುನಾಳ ಶರೀಫ್
ಬಿಡತೇನಿ ದೇಹ ಬಿಡತೇನಿ ||ಪ||
ಬಿಡತೇನಿ ದೇಹವ ಕೊಡತೇನಿ ಭೂಮಿಗೆ
ಇಡತೇನಿ ಮಹಿಮಾದ ನಡತೆ ಹಿಡಿದು ದೇಹಾ ||೧||
ಪಾವಕಗಾಹುತಿ ಮಾಡಿ ಜೀವನದಸು
ನಾ ಬೇರೆ ಬೈಲು ಬ್ರಹ್ಮದೊಳಾಡುತಲಿ ದೇಹಾ ||೨||
ಅವನಿಯೊಳು ಶಿಶುನಾಳಧೀಶನೆ ಗತಿಯೆಂದು
ಜವನ ಬಾಧೆ ಗೆದ್ದು ಶಿವಲೋಕದೊಳು ದೇಹ ಬಿಡತೇನಿ ||೩||
*****
ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ
0 ಕಾಮೆಂಟುಗಳು:
ಕಾಮೆಂಟ್ ಪೋಸ್ಟ್ ಮಾಡಿ